ರಾಯಚೂರು :
ಮಂತ್ರಾಲಯ ಶ್ರೀ ಮಠ ಸದ್ಯಕ್ಕೆ ತೆರೆಯುವುದಿಲ್ಲ. ಭಕ್ತಾದಿಗಳು ಸಹಕರಿಸಬೇಕೆಂದು ರಾಘವೇಂದ್ರ ಸ್ವಾಮಿ ಮಠದ ವ್ಯವಸ್ಥಾಪಕರು ಮನವಿ ಮಾಡಿಕೊಂಡಿದ್ದಾರೆ.
ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಎದುರಾಗಿದ್ದ ಲಾಕ್‍ಡೌನ್ ಮುಗಿದ ನಂತರ ಜೂ.15ರಿಂದ ರಾಯರ ದರ್ಶನ ಸಿಗಲಿದೆ ಎಂದು ತಿಳಿಸಲಾಗಿತ್ತು.
ಆದರೆ, ಕೊರೊನಾ ಮಹಾಮಾರಿಯ ಅಟ್ಟಹಾಸ ಮುಂದುವರೆಯುತ್ತಿರುವುದರಿಂದ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳು, ಮಠದ ಸಿಬ್ಬಂದಿಗಳು ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಮಠ ತೆರೆಯುವ ದಿನಾಂಕವನ್ನು ಮುಂದೂಡಲಾಗಿದೆ ಎಂದು ಶ್ರೀ ಮಠದ ವ್ಯವಸ್ಥಾಪಕ ವೆಂಕಟೇಶ್ ಜೋಷಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ