ಚಾಮರಾಜನಗರ:
ಸುಳ್ವಾಡಿ ಮಾರಮ್ಮ ದೇವಸ್ಥಾನ ವಿಷ ಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸಾದದಲ್ಲಿ ಕ್ರಿಮಿನಾಶಕ ಬೆರೆಸಲಾಗಿದೆ ಎಂದು ದಕ್ಷಿಣ ವಲಯ ಐಜಿಪಿ ಶರತ್ ಚಂದ್ರ ಅವರು ತಿಳಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೇವರ ಪ್ರಸಾದದಲ್ಲಿ ಕ್ರಿಮಿನಾಶಕ ಬೆರೆತಿರುವುದು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಿಂದ ಸಾಬೀತಾಗಿದೆ. 10 ರಿಂದ 12 ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ. ಪ್ರಕರಣ ಸಂಬಂಧ ಈಗಾಗಲೇ ಸಾಕಷ್ಟು ಸುಳಿವು ಸಿಕ್ಕಿದೆ. ಆದರೆ, ಎಲ್ಲ ಅಂಶಗಳನ್ನು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಇದೇ ವೇಳೆ ಮಾತನಾಡಿದ ಮೈಸೂರು ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ಆರ್ಗನೋಫಾಸ್ಪರಸ್ ಅಂಶವುಳ್ಳ ವಿಷವನ್ನು ಬೆರೆಸಲಾಗಿದೆ ಎಂದು ಮಾಹಿತಿ ನೀಡಿದರು.
ಇನ್ನು ಈ ಘಟನೆಗೆ ಪ್ರಮುಖ ಕಾರಣ ದೇವಾಲಯದ ಟ್ರಸ್ಟಿಗಳೇ ಪ್ರಮುಖಕಾರಣ ಎನ್ನಲಾಗುತ್ತಿದ್ದು, ಸರಕಾರ ಹಾಗೂ ಪೋಲಿಸರು ಸರಿಯಾದ ತನಿಖೆ ನಡೆಸಿದರೆ ಘಟನೆ ಹಿಂದಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚಬಹುದಾಗಿದೆ ಅಂತ ಸ್ಥಳೀಯರು ಗಂಭೀರ ಆರೋಪ ಮಾಡುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ