ಮಂಗಳೂರು:
ಮದುವೆಗೆ ಹೊರಟಿದ್ದ ಬಸ್ ರಸ್ತೆ ಬದಿಯಿದ್ದ ಮನೆ ಮೇಲೆ ಉರುಳಿಬಿದ್ದ ಪರಿಣಾಮ 8 ಮಂದಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಪಾಣತ್ತೂರು ಕಲ್ಲಪ್ಪಳ್ಳಿ ಬಳಿ ನಡೆದಿದೆ.
ಪುತ್ತೂರಿನಿಂದ ಕೇರಳದ ಪಾಣತ್ತೂರಿಗೆ 63 ಮಂದಿ ಬಸ್ ನಲ್ಲಿ ತೆರಳುತ್ತಿತ್ತು. ಆದರೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಮನೆಯ ಮೇಲೆ ಉರುಳಿ ಬಿದ್ದಿದೆ.
ಅಪಘಾತದಲ್ಲಿ 8 ಮಂದಿ ಮೃತಪಟ್ಟಿದ್ದು ಹಲವು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೇರಳ ಮತ್ತು ಮಂಗಳೂರು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ