ಬೆಂಗಳೂರು :
ಮದುವೆ ಸಮಾರಂಭಗಳಲ್ಲಿ ಮಾರ್ಷಲ್ ನಿಯೋಜಿಸಿ ಮಾಸ್ಕ್ ಹಾಕಿದ್ದಾರಾ ಇಲ್ವಾ ಅನ್ನೋದು ಪತ್ತೆ ಹಚ್ಚಿ, ಸ್ಥಳದಲ್ಲೇ ದಂಡ ವಸೂಲಿ ಮಾಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಎಲ್ಲ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದುವೆ ಸಮಾರಂಭಗಳಲ್ಲಿ ಅಂತರ ಕಾಯ್ದುಕೊಳ್ಳುತ್ತಿಲ್ಲ. ನಾನೇ ಸಮಾರಂಭಕ್ಕೆ ಹೋದರೆ ಮಾಸ್ಕ್ ತೆಗೆಯಿರಿ ಎಂದು ಹೇಳುತ್ತಾರೆ. ಹೀಗಾಗಿ ಮದುವೆ ಸಮಾರಂಭಗಳಲ್ಲಿ ಒಬ್ಬ ಮಾರ್ಷಲ್ ನೇಮಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಮಾಸ್ಕ್ ಹಾಕಿದ್ದಾರಾ ಇಲ್ವಾ ಅನ್ನೋದು ಪತ್ತೆ ಹಚ್ಚಲಾಗುತ್ತದೆ. ಸ್ಥಳದಲ್ಲೇ ಮಾಸ್ಕ್ ಗೆ ದಂಡ ವಸೂಲಿ ಮಾಡಲಾಗುತ್ತದೆ. ಮದುವೆ ಆಯೋಜಕರ ಮೇಲೂ ದಂಡವನ್ನು ವಿಧಿಸಲಾಗುತ್ತದೆ. ಇಂದು ಅಧಿಕೃತವಾಗಿ ಆರೋಗ್ಯ ಇಲಾಖೆಯಿಂದ ಸುತ್ತೋಲೆ ಪ್ರಕಟವಾಗಲಿದೆ ಎಂದು ಎಚ್ಚರಿಸಿದ್ದಾರೆ
ಮದುವೆ ಸಮಾರಂಭಗಳಲ್ಲಿ 500 ಕ್ಕಿಂತ ಹೆಚ್ಚು ಜನರಿರಬಾರದು, ಎಲ್ಲರೂ ಮಾಸ್ಕ್ ಧರಿಸುವ ನಿಯಮವನ್ನು ಪಾಲಿಸಲು ಈ ಕ್ರಮ ವಹಿಸಲಾಗುವುದು. ಆಹಾರ ಪೂರೈಕೆ ಮಾಡುವವರಿಗೂ ಪರೀಕ್ಷೆ ಮಾಡಿಸಲು ಸೂಚಿಸಲಾಗಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
