ಕೊರೊನಾ ; ಈದ್‌ ಮಿಲಾದ್‌ ಆಚರಣೆಗೆ ಸಾಮೂಹಿಕ ಪ್ರಾರ್ಥನೆ ನಿಷೇಧ!!

ಬೆಂಗಳೂರು : 

     ಮುಸ್ಲಿಂ ಸಮುದಾಯದವರ ಪ್ರಮುಖ ಹಬ್ಬಗಳಲ್ಲಿ ಒಂದಾದ ಈದ್ ಮಿಲಾದ್ ಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವಂತಿಲ್ಲ’ ಎಂದು ಸ್ಪಷ್ಟಪಡಿಸಿದೆ.

     ಈಗಾಗಲೇ ದಸರಾ ಮತ್ತು ದೀಪಾವಳಿ ಹಬ್ಬದ ಆಚರಣೆಗೆ ಮಾರ್ಗ ಸೂಚಿ ಪ್ರಕಟಿಸಿದ್ದ ರಾಜ್ಯ ಸರ್ಕಾರ ಇದೀಗ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಈದ್ ಮಿಲಾದ್ ಆಚರಿಸುವಂತೆ ಸೂಚಿಸಿದೆ.

     ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಈದ್ ಮಿಲಾದ್ ಹಬ್ಬದ ವೇಳೆ ಸಾಮೂಹಿಕ ಮೆರವಣಿಗೆಗೆ ನಿಷೇಧ ಹೇರಲಾಗಿದೆ. ಸ್ಮಶಾನಗಳು (ಖಬ್ರಿಸ್ತಾನ) ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ, ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ನಿಷೇಧ ವಿಧಿಸಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಧ್ವನಿವರ್ಧಕ ಬಳಸುವಂತಿಲ್ಲ. ಮಸೀದಿಗಳಲ್ಲಿ ಕೋವಿಡ್ ನಿಯಮ ಪಾಲನೆ ಕಡ್ಡಾಯ ಎಂಬುದಾಗಿ ಮಾರ್ಗಸೂಚಿಯಲ್ಲಿ ತಿಳಿಸಿದೆ.

     ಒಂದು ವೇಳೆ ಈ ನಿಮಯಗಳನ್ನು ಮೀರಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap