ಬೆಂಗಳೂರು : ಯುಕೋ ಬ್ಯಾಂಕ್ ನಲ್ಲಿ ಆಕಸ್ಮಿಕ ಬೆಂಕಿ-ದಟ್ಟ ಹೊಗೆ!!

ಬೆಂಗಳೂರು:

     ನಗರದ ಎಂಜಿ ರಸ್ತೆಯಲ್ಲಿರುವ ಯುಕೋ ಬ್ಯಾಂಕ್ ನ ಎರಡನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ, ದಟ್ಟ ಹೊಗೆ ವ್ಯಾಪಿಸಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

     ಬ್ಯಾಂಕ್ ಸಿಬ್ಬಂದಿ ಮತ್ತು ಜನರು ಕಟ್ಟಡದ ಮೇಲೆ ಸಿಲುಕಿಕೊಂಡಿದ್ದು, ಬೆಂಕಿ ನಂದಿಸಲು ರಕ್ಷಣಾ ಸಿಬ್ಬಂದಿ ಹರಸಾಹಸ ಮಾಡುತ್ತಿದ್ದಾರೆ. ಏಣಿ ಮೂಲಕ ಜನರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗುತ್ತಿದೆ. ಇನ್ನು ಬ್ಯಾಂಕ್ ನೊಳಗೆ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

      ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡಿರುವ ಬೆಂಕಿಯ ಕಿಡಿ ಕೆಲ ಹೊತ್ತಿನಲ್ಲೇ ವ್ಯಾಪಿಸಿದ್ದು, ಇಡೀ ಮಹಡಿಯಲ್ಲಿ ಬೆಂಕಿ ಆವರಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ಆಗ್ನಿ ಆಕಸ್ಮಿಕ ಸಂಭವಿಸಿದೆ ಎಂದು ಪ್ರಾಥಮಿಕ ವರದಿ ತಿಳಿಸಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap