ಮಾತೆ ಮಹಾದೇವಿ ಆರೋಗ್ಯ ಸ್ಥಿತಿ ಗಂಭೀರ!

0
17

ಬಾಗಲಕೋಟ: 

      ಜಿಲ್ಲೆಯ ಕೂಡಲಸಂಗಮದ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿಯವರ ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದು ಬೆಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

      ಅವರು ತೀವ್ರ ಉಸಿರಾಟದ ಸಮಸ್ಯೆ ಮತ್ತು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದಾರೆ. ಒಂದು ವರ್ಷದಿಂದ ಅವರು ಮೂತ್ರಪಿಂಡ ವೈಫಲ್ಯಕ್ಕೆ ಒಳಗಾಗಿದ್ದು, ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು.

      ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಮಾತೆ ಮಹಾದೇವಿಯವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಉಸಿರಾಟದ ಸಮಸ್ಯೆ ಮತ್ತು ಶ್ವಾಸಕೋಶದ ಸೋಂಕಿನಿಂದ ಮಾತೆ ಮಹಾದೇವಿ ಬಳಲುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.  

      ಮಾತೆ ಮಹಾದೇವಿ ಅವರಿಗೆ ಹೆಚ್ಚಿನ ಚಿಕಿತ್ಸೆ ಸೌಲಭ್ಯ ನೀಡುವ ಸಲುವಾಗಿ ರಾಜಾಜಿನಗರದಲ್ಲಿರುವ ಬಸವ ಮಂಟಪದಲ್ಲಿ ಸಭೆ ನಡೆಸಲಾಗಿದೆ. ಗೃಹ ಸಚಿವ ಎಂ.ಬಿ. ಪಾಟೀಲ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಮಹಾದೇವಿ ಅವರಿಗೆ ಎಲ್ಲಿ ಚಿಕಿತ್ಸೆ ಮುಂದುವರಿಸಬೇಕು ಎಂಬುದರ ಬಗ್ಗೆ ಚರ್ಚಿಸಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

LEAVE A REPLY

Please enter your comment!
Please enter your name here