ಮಂಗಳೂರು :
ಮೀನುಗಾರಿಕಾ ಇಲಾಖೆಯ ‘ಮತ್ಸ್ಯ ದರ್ಶಿನಿ’ ಉಪಾಹಾರ ಮಂದಿರಗಳನ್ನು ರಾಜ್ಯದ ಎಲ್ಲ ಭಾಗಗಳಲ್ಲೂ ವಿಸ್ತರಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, “ಪ್ರಸ್ತುತ ಮೀನುಗಾರಿಕಾ ಇಲಾಖೆಯ ಮತ್ಸ್ಯ ದರ್ಶಿನಿ ಉಪಾಹಾರ ಮಂದಿರಗಳು ಆಯ್ದ ಕೆಲವು ನಗರಗಳಲ್ಲಿ ಮಾತ್ರ ಇವೆ. ಹೀಗಾಗಿ ರಾಜ್ಯದ ಎಲ್ಲ ತಾಲ್ಲೂಕುಗಳಲ್ಲಿ ಅತ್ಯಂತ ಸ್ವಾದದ ಸಮುದ್ರಾಹಾರಗಳು ದೊರೆಯುವಂತೆ ಮತ್ಸ್ಯ ದರ್ಶಿನಿ ಆರಂಭಿಸಲಾಗುವುದು, ಈ ಮೂಲಕ ಮೀನುಗಾರಿಕೆಯನ್ನು ಬೆಂಬಲಿಸಲಾಗುವುದು” ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ, “ಮೀನುಗಾರ ಮಹಿಳೆಯರು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಹೊಂದಿರುವ ಐವತ್ತು ಸಾವಿರ ರೂಪಾಯಿ ಸಾಲ ಮನ್ನಾ ಮಾಡಲು ಸರ್ಕಾರ ನಿರ್ಧರಿಸಿದೆ. ಆದ್ದರಿಂದ ಸಾಲ ಮರುಪಾವತಿಸಲು ಒತ್ತಡ ಹೇರಬಾರದೆಂದು ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ನಿರ್ದೇಶಿಸಲಾಗಿದೆ” ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ