ಮುಂಬೈ:
ಭಾರತೀಯ ಚುನಾವಣಾ ಆಯೋಗವು ಮೇ 27 ರ ಮೊದಲು ಮಹಾರಾಷ್ಟ್ರದ ವಿಧಾನ ಪರಿಷತ್ತಿಗೆ ಚುನಾವಣೆ ನಡೆಸಲು ಅನುಮತಿ ನೀಡಿದೆ.
ಕಳೆದ ವರ್ಷ ನವೆಂಬರ್ 28 ರಂದು ಪ್ರಮಾಣವಚನ ಸ್ವೀಕರಿಸಿದ ಠಾಕ್ರೆ ರಾಜ್ಯ ವಿಧಾನ ಸಭೆಗೆ ಆಯ್ಕೆಯಾಗಲು ಮೇ 27 ರವರೆಗೆ ಸಮಯವಿದ್ದು, ಅವರೊಮ್ಮೆ ಆಯ್ಕೆಯಾಗುವಲ್ಲಿ ವಿಫಲವಾದರೆ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕಾಗುತ್ತದೆ. ಮೇ 27 ರ ಮೊದಲು ಮಹಾರಾಷ್ಟ್ರದ ವಿಧಾನ ಪರಿಷತ್ತಿಗೆ ಚುನಾವಣೆ ನಡೆಸಲು ಒಪ್ಪಿರುವ ಆಯೋಗ ಚುನಾವಣೆಯ ಸಮಯದಲ್ಲಿ ಕೋವಿಡ್ ವಿರುದ್ಧ ಸುರಕ್ಷತೆಗಾಗಿ ಅಗತ್ಯ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಹೇಳಿದೆ.
ಏಪ್ರಿಲ್ 24ರಂದು ತೆರವಾಗಿದ್ದ ರಾಜ್ಯದ ವಿಧಾನ ಪರಿಷತ್ 9 ಸ್ಥಾನಗಳಿಗೆ ಚುನಾವಣೆ ನಡೆಸುವಂತೆ ಬಿ.ಎಸ್.ಕೊಶ್ಯರಿ ಗುರುವಾರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಇದೀಗ ಆಯೋಗವು ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಿದೆ.
