ಕಾಲೇಜಿನಲ್ಲಿ ರ‍್ಯಾಂಪ್’ವಾಕ್ ವೇಳೆ ವಿದ್ಯಾರ್ಥಿನಿಗೆ ಹಾರ್ಟ್ ಅಟ್ಯಾಕ್ : ಸಾವು!!

ಬೆಂಗಳೂರು:

       ರ‍್ಯಾಂಪ್ ವಾಕ್ ಪ್ರಾಕ್ಟೀಸ್ ಮಾಡುತ್ತಿದ್ದ ವೇಳೆ ವಿದ್ಯಾರ್ಥಿನಿಯೋರ್ವಳು ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಪೀಣ್ಯ ಏಮ್ಸ್ ಕಾಲೇಜಿನಲ್ಲಿ ನಡೆದಿದೆ

      ಶಾಲಿನಿ(21) ಮೃತ ವಿದ್ಯಾರ್ಥಿನಿಯಾಗಿದ್ದು, ಏಮ್ಸ್ ಕಾಲೇಜ್​ನಲ್ಲಿ ಎಂಬಿಎ ಓದುತ್ತಿದ್ದ ಶಾಲಿನಿ, ಕಾಲೇಜಿನಲ್ಲಿ ನಡೆಯಬೇಕಿದ್ದ ಫ್ರೆಶರ್ಸ್​ ಡೇಗಾಗಿ ರ‍್ಯಾಂಪ್ ವಾಕ್​ ಅಭ್ಯಾಸ ನಡೆಸುತ್ತಿದ್ದ ವೇಳೆ ವೇದಿಕೆಯ ಮೇಲೆ ಕುಸಿದು ಬಿದಿದ್ದಾರೆ ಎನ್ನಲಾಗಿದೆ.

      ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಯಿತು. ತಪಾಸಣೆ ನಡೆಸಿದ ವೈದ್ಯರು ಶಾಲಿನಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ.

      ಘಟನಾ ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಾಲಿನಿ ಮೃತದೇಹವನ್ನು ಮರಣೋತ್ತರ ಪರಿಕ್ಷೆಗಾಗಿ ಸಪ್ತಗಿರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ