ಶಿವಮೊಗ್ಗ:
ಐರನ್ ಬಾಕ್ಸ್ ನ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಎಂಬಿಬಿಎಸ್ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ನಗರದ ಪುರಲೆ ಬಡಾವಣೆಯಲ್ಲಿ ನಡೆದಿದೆ.
ದಾವಣಗೆರೆ ಮೂಲದ ನಿತಿನ್(23) ಮೃತ ವೈದ್ಯ ವಿದ್ಯಾರ್ಥಿ. ಈತ ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದ ನಿತಿನ್, ಪುರಲೆ ಬಡಾವಣೆಯಲ್ಲಿ ರೂಮ್ ಮಾಡಿಕೊಂಡಿದ್ದ.
ಸೋಮವಾರ ರಾತ್ರಿ ಐರನ್ ಬಾಕ್ಸ್ ನಿಂದ ಶಾರ್ಟ್ ಸರ್ಕ್ಯೂಟ್ ಆಗಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
