ಚಿಕ್ಕಮಗಳೂರು :
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಲು ಸರ್ಕಾರ ಮುಂದಾಗಿದೆ.
ಹೌದು, ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ನಗರದ ಕದ್ರಿಮಿದ್ರಿಯಲ್ಲಿ ಮೀಸಲಿಟ್ಟಿದ್ದ 35 ಎಕರೆ ಜಾಗಕ್ಕೆ ಕೇಂದ್ರ ಸರ್ಕಾರ ಮಂಜೂರಾತಿ ನೀಡಿದ್ದು, ಕೇಂದ್ರ ಆರೋಗ್ಯ ಸಚಿವರಾದ ಡಾllಹರ್ಷವರ್ಧನ್ ಅವರು ಇಂದು ತಮ್ಮ ಕಛೇರಿಯಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಮಂಜೂರಾತಿ ಆದೇಶ ಪತ್ರವನ್ನು ಹಸ್ತಾಂತರಿಸಿದ್ದಾರೆ.
ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾ ಆಸ್ಪತ್ರೆಯನ್ನು ಉನ್ನತೀಕರಿಸಿ ಮೆಡಿಕಲ್ ಕಾಲೇಜಾಗಿ ಪರಿವರ್ತಿಸುವುದರ ಜೊತೆಗೆ ಜಿಲ್ಲೆಗೆ ಅಗತ್ಯವಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕೊರತೆಯನ್ನು ನಿವಾರಿಸಲು ವೈದ್ಯಕೀಯ ಕಾಲೇಜು ನಿರ್ಮಾಣ ಸಹಕಾರಿಯಾಗಿದೆ.
ವೈದ್ಯಕೀಯ ಕಾಲೇಜು ನಿರ್ಮಾಣದ ಮಂಜೂರಾತಿಗಾಗಿ ಶ್ರಮ ವಹಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಆರೋಗ್ಯ ಸಚಿವರು ಸೇರಿದಂತೆ ಬೆಂಬಲ ನೀಡಿದ ಜಿಲ್ಲೆಯ ಜನತೆಗೆ ಸಂಸದರು ಧನ್ಯವಾದ ತಿಳಿಸಿದ್ದಾರೆ.
ಜಿಲ್ಲೆಯ ಜನರು ಬಹಳ ವರ್ಷಗಳಿಂದ ಜಿಲ್ಲೆಗೆ ಅಗತ್ಯವಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಬಗ್ಗೆ ಸಂಸದರಲ್ಲಿ ಬೇಡಿಕೆಯಿಟ್ಟಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮನವೊಲಿಸಿ ಜಿಲ್ಲೆಗೆ ಮೆಡಿಕಲ್ ಕಾಲೇಜು ಮಂಜೂರು ಮಾಡಿಸಿಕೊಡುವಲ್ಲಿ ಸಂಸದರು ಯಶಸ್ವಿಯಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ