ಚಾರ್ಮಾಡಿ ಘಾಟ್‌ನಲ್ಲಿ ಮಿನಿ ಬಸ್‌ ಸಂಚಾರ ಪ್ರಾರಂಭ!!

ಚಿಕ್ಕಮಗಳೂರು:

      ಚಾರ್ಮಾಡಿ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನ ಹಾಗೂ ಮಿನಿ ಬಸ್‌ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. 

      ಜಿಲ್ಲಾಧಿಕಾರಿಗಳು ಡಾ.ಬಗಾದಿ ಗೌತಮ್​​ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರದಿಂದ ಕಾರು, ಮಿನಿ ಟೆಂಪೋ ಹಾಗೂ ಮಿನಿ ಕೆ.ಎಸ್​.ಆರ್​.ಟಿ.ಸಿ ಬಸ್​​ಗಲು ಸಂಚಾರ ಆರಂಭಿಸಿದ್ದು, ಘನ ವಾಹನಗಳಾದ ಟ್ಯಾಂಕರ್, ರಾಜಹಂಸ ಬಸ್ ಸೇರಿದಂತೆ ಇತರೆ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಮುಂದಿನ ಆದೇಶದವರೆಗೂ ಈ ವ್ಯವಸ್ಥೆ ಜಾರಿಯಲ್ಲಿದೆ.‌

       ಚಾರ್ಮಾಡಿ ಘಾಟ್‌ ತಿರುವುಗಳಲ್ಲಿ ಪ್ರತಿಫಲಕ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ತಡೆಗೋಡೆಗಳಿಗೆ ಬಣ್ಣ ಬಳಿಯಲಾಗಿದ್ದು, ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿ ಕಾರಿಗಳು ತಿಳಿಸಿದ್ದಾರೆ.

      ಚಾರ್ಮಾಡಿ ಘಾಟ್​​​ನಲ್ಲಿ ವಾಹನ ಸಂಚಾರ ಬಂದ್​ ಮಾಡಲಾಗಿತ್ತು. ಇದೀಗ ಸಾರ್ವಜನಿಕರ ಹಿತದೃಷ್ಟಿಯಿಂದ ಇಂದಿನಿಂದ ಮಿನಿ (ಲಘು) ವಾಹನಗಳ ಸಂಚಾರ ಆರಂಭವಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link