ಶಿವಮೊಗ್ಗ :
ಇಂದು ಚುನಾವಣಾಧಿಕಾರಿಗಳು ಸಚಿವ ಡಿ.ಕೆ.ಶಿವಕುಮಾರ್ ರವರ ಹೆಲಿಕಾಫ್ಟರ್ ನ್ನು ತಪಾಸಣೆ ಮಾಡಿದ ಘಟನೆ ನಡೆದಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಇಂದು ಮಧು ಬಂಗಾರಪ್ಪ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ಉಭಯ ಪಕ್ಷಗಳ ನಾಯಕರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಮಧು ಬಂಗಾರಪ್ಪ ನಾಮಪತ್ರ ಸಲ್ಲಿಕೆ ವೇಳೆ ಹಾಜರಿರಲು ಸಚಿವ ಡಿ.ಕೆ. ಶಿವಕುಮಾರ್ ಶಿವಮೊಗ್ಗಕ್ಕೆ ಹೆಲಿಕಾಪ್ಟರ್ ನಲ್ಲಿ ಆಗಮಿಸಿದ್ದರು. ನಗರದ ಸರ್ಕಿಟ್ ಹೌಸ್ ಹೆಲಿಪ್ಯಾಡ್ ನಲ್ಲಿ ಡಿಕೆಶಿ ಹೆಲಿಕಾಪ್ಟರ್ ಲ್ಯಾಂಡ್ ಆಗಿದ್ದು, ಚುನಾವಣಾಧಿಕಾರಿಗಳು ಡಿಕೆಶಿ ಆಗಮಿಸಿದ ಹೆಲಿಕಾಪ್ಟರ್ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
