ಹುಬ್ಬಳ್ಳಿ :
ಕುಂದಗೋಳ ವಿಧಾನಸಭಾ ಉಪಚುನಾವಣೆಯ ಉಸ್ತುವಾರಿ ಹೊತ್ತುಕೊಂಡಿರುವ ಸಚಿವ ಡಿ.ಕೆ.ಶಿವಕುಮಾರ್ ಚುನಾವಣಾ ಒತ್ತಡದಿಂದ ಆರೋಗ್ಯದಲ್ಲಿ ಏರುಪೇರಾಗಿದೆ ಎನ್ನಲಾಗಿದೆ.
ಬಿಸಿಲು ಹಾಗೂ ಚುನಾವಣಾ ಒತ್ತಡದಿಂದ ಡಿ.ಕೆ.ಶಿವಕುಮಾರ್ ಅವರಿಗೆ ಹೈ ಬಿಪಿ ಉಂಟಾಗಿದ್ದು ಅಸ್ವಸ್ಥಗೊಂಡಿದ್ದಾರೆ. ವೈದ್ಯರ ಸಲಹೆ ಮೇರೆಗೆ ಹೈ ಬಿಪಿ, ಸಕ್ಕರೆ ಕಾಯಿಲೆಗೆ ಚಿಕಿತ್ಸೆ ಪಡೆದ ಡಿ.ಕೆ.ಶಿವಕುಮಾರ್ ಚುನಾವಣೆ ಪ್ರಚಾರದಿಂದ ಸದ್ಯ ಹಿಂದೆ ಸರಿದು, ಹುಬ್ಬಳ್ಳಿಯ ಕಾಟನ್ ಕೌಂಟಿ ರೆಸಾರ್ಟ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಸದ್ಯ ಡಿ.ಕೆ.ಶಿವಕುಮಾರ್ ಪಡೆಯುತ್ತಿರುವ ಕೊಠಡಿಗೆ ಪ್ರಮುಖ ಮುಖಂಡರು ಆಗಮಿಸುತ್ತಿದ್ದು ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂಬಂಧಪಟ್ಟ ಚರ್ಚೆ ನಡೆಸುತ್ತಿದ್ದಾರೆ. ಹಲವು ಕಾಂಗ್ರೆಸ್ ನಾಯಕರು ಬಂದು ಡಿಕೆಶಿ ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
