ಬೆಂಗಳೂರು:
ಸಮ್ಮಿಶ್ರ ಸರ್ಕಾರದ ದೋಸ್ತಿಗಳ ನಡುವೆ ಭಿನ್ನಾಭಿಪ್ರಾಯ ಬಂದಾಗೆಲ್ಲ ಮುಂದೆ ನಿಂತು ಸರಿಪಡಿಸಿದ್ದ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಹೌದು, ಚುನಾವಣೋತ್ತರ ಸಮೀಕ್ಷೆ ಪ್ರಕಟಗೊಂಡ ದಿನವೇ ಟ್ರಬಲ್ ಶೂಟರ್ ಕುಟುಂಬ ಸಮೇತ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದಾರೆ. ಮೇ 27ರವರೆಗೆ ಆಸ್ಟ್ರೇಲಿಯಾ ಪ್ರವಾಸ ಮಾಡಲಿರುವ ಡಿಕೆಶಿ, ಸಂಪೂರ್ಣವಾಗಿ ರಾಜಕಾರಣ ಮರೆತು ಕುಟುಂಬದೊಂದಿಗೆ ಕಾಲ ಕಳೆಯಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಅಲ್ಲದೇ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ಹಿನ್ನಡೆ ಉಂಟಾಗಲಿದೆ ಎಂಬ ವರದಿಗಳು ಬಂದಿವೆ.
ಇದೇ ಸಮಯದಲ್ಲಿ ಡಿ.ಕೆ.ಶಿವಕುಮಾರ್ ಅವರು ವಿದೇಶ ಪ್ರವಾಸಕ್ಕೆ ಹೋಗಿದ್ದಾರೆ. ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
