ಮೈಸೂರು:

ಸಚಿವ ಜಿಟಿ ದೇವೇಗೌಡ್ರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಮೈಸೂರಿನ ಕೊಲಂಬಿಯ ಏಷ್ಯಾ ಆಸ್ಪತ್ರೆ ಬಳಿ ನಡೆದಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಸಲುವಾಗಿ ಜಿ.ಟಿ ದೇವೇಗೌಡ್ರು ಮಳವಳ್ಳಿಗೆ ತೆರಳುತ್ತಿದ್ದ ವೇಳೆ, ಬೆಂಗಳೂರಿನಿಂದ ಮೈಸೂರಿನತ್ತ ಚಲಿಸುತ್ತಿದ್ದ ಲಾರಿಯೊಂದು ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆ ಬಳಿ ಜಿಟಿಡಿ ಇದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಈ ಅಪಘಾತದಿಂದ ಸಚಿವರು ಸೇರಿದಂತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಅಪಘಾತ ಸಂಭವಿಸಿದ ಬಳಿಕ ಜಿ.ಟಿ ದೇವೇಗೌಡ ಅವರು ಅಪಘಾತಕ್ಕೆ ಒಳಗಾದ ಕಾರನ್ನು ಬಿಟ್ಟು ಬೇರೆ ಕಾರಿನಲ್ಲಿ ಪ್ರಚಾರಕ್ಕೆ ತೆರಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








