ಬೆಂಗಳೂರು:
ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪಕ್ಷೇತರ ಶಾಸಕ ನಾಗೇಶ್ ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ನಂತರ ತಮ್ಮ ಮಂತ್ರಿಗಿರಿ ಶಾಶ್ವತ ಅಲ್ಲ ಎಂಬ ಆತಂಕ ಎದುರಾಗುತ್ತಿದ್ದಂತೆ ಮೈತ್ರಿ ಸರ್ಕಾರಕ್ಕೆ ನೀಡಿದ್ದ ತಮ್ಮ ಬೆಂಬಲವನ್ನು ವಾಪಸ್ ಪಡೆದಿದ್ದಾರೆ.
ಈ ಬಗ್ಗೆ ರಾಜ್ಯಪಾಲರಿಗೆ ಪತ್ರ ಬರೆದಿರುವ ನಾಗೇಶ್, ‘ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂದೆ ಪಡೆಯುತ್ತಿದ್ದೇನೆ. ಅಲ್ಲದೆ ಬಿಜೆಪಿಗೆ ನನ್ನ ಬೆಂಬಲ ನೀಡುತ್ತಿದ್ದೇನೆ.’ ಎಂದು ತಿಳಿಸಿದ್ದಾರೆ.
ನಾಗೇಶ್ ಬೆಂಬಲದೊಂದಿಗೆ ವಿಧಾನಸಭೆಯಲ್ಲಿ ಬಿಜೆಪಿ ಸಂಖ್ಯಾಬಲ 106ಕ್ಕೆ ಏರಿಕೆಯಾಗಿದ್ದು, ಇನ್ನು ರಾಜೀನಾಮೆ ನೀಡಿರುವ ಶಾಸಕರ ಸಂಖ್ಯೆ ಕಳೆದರೆ ಮೈತ್ರಿ ಸರ್ಕಾರದ ಬಲ 105ಕ್ಕೆ ಕುಸಿದಿದೆ.
![](https://prajapragathi.com/wp-content/uploads/2019/07/nagesh-resing.gif)