ಬೆಂಗಳೂರು :
ಬೆಂಗಳೂರು ಬಿಟ್ಟು ಹೋಗಲೇಬೇಕು ಎಂದುಕೊಂಡಿರುವವರು ಇವತ್ತೇ ಹೋಗಿ ಬಿಡಿ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ನಾಳೆ ರಾತ್ರಿ 8 ಗಂಟೆಯಿಂದ ಏಳು ದಿನಗಳ ಕಾಲ ಲಾಕ್ ಡೌನ್ ಜಾರಿಗೊಳಿಸಿರುವ ಹಿನ್ನಲೆಯಲ್ಲಿ ಇಂದು ಸಿಲಿಕಾನ್ ಸಿಟಿ ತೊರೆದು ತಮ್ಮ ಊರುಗಳತ್ತ ಪ್ರಯಾಣ ಬೆಳೆಸುತ್ತಿರುವವರ ಸಂಖ್ಯೆ ಹೆಚ್ಚಾಗಿದೆ.
ಈ ಹಿನ್ನಲೆಯಲ್ಲಿ ಸಚಿವ ಆರ್.ಅಶೋಕ್ ಮಾತನಾಡಿ, ಒಂದು ವಾರ ಬೆಂಗಳೂರು ಲಾಕ್‍ಡೌನ್ ಘೋಷಣೆ ಮಾಡಿದ ತಕ್ಷಣ ಸಾವಿರಾರು ಜನರು ಬೆಂಗಳೂರು ಬಿಟ್ಟು ತಮ್ಮ ತಮ್ಮ ಊರುಗಳತ್ತ ಹೋಗುತ್ತಿದ್ದಾರೆ. ದಯವಿಟ್ಟು ಬೆಂಗಳೂರು ಬಿಟ್ಟು ಯಾರೂ ಹೋಗಬೇಡಿ. ಒಂದು ವಾರ ಇಲ್ಲೇ ಇರಿ. ಅನಿವಾರ್ಯತೆ ಇದೆ ಹೋಗಲೇಬೇಕು ಅಂದರೆ ಮಾತ್ರ ಹೋಗಿ. ಆದರೆ ಹೋಗುವರು ಇವತ್ತೇ ಹೋಗಿ ಬಿಡಿ. ಇಲ್ಲಿಂದ ಜಿಲ್ಲೆಗಳಿಗೆ ಹೋಗುವರನ್ನು ಏನು ಮಾಡಬೇಕು ಅಂತ ಆಯಾ ಜಿಲ್ಲಾಡಳಿತ ನಿರ್ಧಾರ ಕೈಗೊಳ್ಳುತ್ತೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
