ದಾವಣಗೆರೆ :
ಲಾರಿ ಹಾಗೂ ಲ್ಯಾಂಡ್ ರೋವರ್ ಕಾರಿನ ನಡುವೆ ಸಂಭವಿಸಿ ಸಚಿವ ಜಗದೀಶ್ ಶೆಟ್ಟರ್ ಪುತ್ರ ಪ್ರಯಾಣಿಸುತ್ತಿದ್ದ ಕಾರು ನಗರದ ಹಳೇ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತಕ್ಕೀಡಾಗಿದೆ.
ಅಪಘಾತದಲ್ಲಿ ಪ್ರಶಾಂತ್ ಶೆಟ್ಟರ್, ಪತ್ನಿ ಅಂಚಲ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗಳುಗಳನ್ನು ಸದ್ಯ ಎಸ್.ಎಸ್. ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ದಾವಣಗೆರೆಯಿಂದ ಹುಬ್ಬಳ್ಳಿ ನಿವಾಸಕ್ಕೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ.
ಸ್ಥಳಕ್ಕೆ ದಕ್ಷಿಣ ಸಂಚಾರ ಪೊಲೀಸ್ ಠಾಣೆ ಪಿಎಸ್‌ಐ ಕಿರಣಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
