ಬೆಂಗಳೂರು:

ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ಚೆನ್ನೈನ ರೆಲಾ ಆಸ್ಪತ್ರೆ ವಿಚಾರದಲ್ಲಿ ತಾವು ನೀಡಿದ ಹೇಳಿಕೆ ವಿವಾದಕ್ಕೆ ಎಡೆಮಾಡಿಕೊಟ್ಟ ಹಿನ್ನೆಲೆಯಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ.
ಚೆನ್ನೈನ ಆಸ್ಪತ್ರೆಗೆ ಭೇಟಿ ನೀಡಿ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಿದ ಸಂದರ್ಭದಲ್ಲಿ ನೀಡಿದ ಹೇಳಿಕೆಯನ್ನು ಯಾರೂ ತಪ್ಪಾಗಿ ಭಾವಿಸುವುದು ಬೇಡ. ಒಂದೊಮ್ಮೆ ತಮ್ಮ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮೆ ಯಾಚಿಸುವುದಾಗಿಯೂ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿದ್ಧಗಂಗಾ ಶ್ರೀಗಳ ಉಪಚರಿಸಿದ ವೈದ್ಯರಿಗೆ ಧರ್ಮದ ಹಣೆಪಟ್ಟಿ : ವಿವಾದದಲ್ಲಿ ಸಚಿವ ಡಿಕೆಶಿ!!!
ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವ ಡಿಕೆಶಿ, ಒಂದು ಉತ್ತಮ ಆಸ್ಪತ್ರೆ ನಿರ್ಮಾಣ, ನಿರ್ವಹಣೆಗೆ ಯಾವುದೇ ಜಾತಿ, ಧರ್ಮದ ಲೇಪ ಇರುವುದಿಲ್ಲ ಎಂಬುದು ನನ್ನ ಮಾತಿನ ತಿರುಳಾಗಿತ್ತು, ನೈಜ ಭಾವನೆಯಾಗಿತ್ತು. ಆದರೆ ಬಿಜೆಪಿಯವರು ಅದನ್ನು ತಿರುಚಿದ್ದಾರೆ ಎಂದು ತಮ್ಮ ಹೇಳಿಕೆಯಲ್ಲಿ ಸಚಿವರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








