ಸಚಿವ ಎಸ್.ಟಿ.ಸೋಮಶೇಖರ್’ಗೆ ಹೋಂ ಕ್ವಾರಂಟೈನ್!!

ಮೈಸೂರು:

      ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಅವರ ಆಪ್ತ ಸಹಾಯಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸಚಿವರನ್ನು ಒಂದು ವಾರಗಳ ಅವಧಿ ಕ್ವಾರಂಟೈನ್ ‌ಗೆ ಒಳಪಡಿಸಲಾಗಿದೆ.

       ರಾಜ್ಯದಲ್ಲಿ ಯಾರನ್ನೂ ಬಿಟ್ಟು ಬಿಡದೇ ಕಾಡುತ್ತಿರುವ ಕೊರೊನಾ ಮಹಾಮಾರಿ ಈಗಾಗಲೇ ಅನೇಕ ಸಚಿವರು, ಶಾಸಕರು, ಸಂಸದರಿಗೆ ಭೀತಿಯನ್ನುಂಟು ಮಾಡಿದೆ. ಇದೀಗ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೂ ಕೊರೊನಾ ಕಂಟಕ ಎದುರಾಗಿದ್ದು, ಅವರ ಆಪ್ತ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 

       ಈ ಹಿನ್ನೆಲೆ ಸೋಮಶೇಖರ್ ಅವರ ಕಚೇರಿಯನ್ನು ಸೀಲ್ ‌ಡೌನ್ ಮಾಡಲಾಗಿದೆ. ಸಹಕಾರ ಸಚಿವರ ನೆಲ ಮಹಡಿ ಕೊಠಡಿ ಸಂಖ್ಯೆ 38-39ರಲ್ಲಿ ಆಪ್ತ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗುವುದು. ಈ ಹಿನ್ನೆಲೆಯಲ್ಲಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೋಂಕ್ವಾರಂಟೇನ್ ಗೆ ಒಳಗಾಗಲಿದ್ದಾರೆ.

      ಅಲ್ಲದೆ ಇಂದಿನಿಂದ 7 ದಿನಗಳ ಕಾಲ ಸಾರ್ವಜನಿಕ ಪ್ರವೇಶವನ್ನು ಸಹ ನಿರ್ಬಂಧಿಸಲಾಗಿದೆ ಎಂದು ಸಹಕಾರ ಸಚಿವರ ವಿಶೇಷ ಕರ್ತವ್ಯಾಧಿಕಾರಿಯಿಂದ ಮಾಹಿತಿ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link