ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕ ಶೀಘ್ರ ಮಾಡುವಂತೆ ಸಲಹೆ : ದೇವೇಗೌಡ

ಬೆಂಗಳೂರು

      ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಆಗಿಲ್ಲ ಚರ್ಚೆಯೂ ಆಗಿಲ್ಲ. ಆದರೆ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರೊಂದಿಗೆ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕ ಶೀಘ್ರ ಮಾಡುವಂತೆ ಸಲಹೆ ಮಾಡಿರುವುದಾಗಿ ಮಾಜಿ ಪ್ರಧಾನಿ ದೇವೇಗೌಡರು ತಿಳಿಸಿದರು.

     ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆನೆಗುದಿಗೆ ಬಿದ್ದಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ, ನಿಗಮಮಂಡಳಿಗಳ ನೇಮಕ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸಲಹೆ ಮಾಡಿದ್ದಾರೆ. ಆದರೆ ರಾಹುಲ್ ಅವರನ್ನು ಭೇಟಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

      ರಾಜ್ಯದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗೆ ನಿನ್ನೆಯಷ್ಟೇ ಭಾರತದ ಚುನಾವಣಾ ಆಯೋಗ ವೇಳಾ ಪಟ್ಟಿ ಪ್ರಕಟಿಸಿದೆ. ಕಾಂಗ್ರೆಸ್-ಜೆಡಿಎಸ್ ನಡುವಿನ ಚುನಾವಣಾ ಮೈತ್ರಿ ಬಗ್ಗೆ ಇನ್ನು ತೀರ್ಮಾನವಾಗಿಲ್ಲ. ಅದಕ್ಕೆ ಒಂದೆರಡು ದಿನ ಸಮಯಾವಕಾಶ

      ಬೇಕಾಗಿದೆ ಮಂಡ್ಯ ಲೋಕಸಭಾ ಕ್ಷೇತ್ರ ಸೇರಿದಂತೆ ಇನ್ನು ಯಾವುದೇ ಕ್ಷೇತ್ರಕ್ಕೆ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಿಲ್ಲ. ಒಂದೆರಡು ದಿನಗಳ ನಂತರ ಅಭ್ಯರ್ಥಿಗಳ ಆಯ್ಕೆಯೂ ಕೂಡ ಅಂತಿಮವಾಗಲಿದೆ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link