ಬೆಂಗಳೂರು:
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ರವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಇತ್ತೀಚಿಗೆ ಸಚಿವ ಮಾಧುಸ್ವಾಮಿ ಅವರ ಕಾರು ಚಾಲಕನಿಗೆ ಕರೊನಾ ಸೋಂಕು ತಗುಲಿತ್ತು. ಬಳಿಕ ಬೆಂಗಳೂರಿನ ಸಚಿವರ ಅಧಿಕೃತ ನಿವಾಸದ ಅಡುಗೆ ಸಿಬ್ಬಂದಿಗೂ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜೆಸಿಎಂ ಶನಿವಾರ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು.
ಶನಿವಾರ ಅಧಿವೇಶನದಲ್ಲಿ ಭಾಗವಹಿಸಿ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದ ಸಚಿವರು ಭಾನುವಾರ ಬೆಳಗ್ಗೆ 11.30ಕ್ಕೆ ಜೆ.ಸಿ.ಪುರದ ನಿವಾಸಕ್ಕೆ ಮರಳಿದ್ದರು. ಅಷ್ಟರಲ್ಲಿ ಮೊಬೈಲ್‌ಗೆ ಕೋವಿಡ್ ಪರೀಕ್ಷೆ ವರದಿ ಬಂದಿದ್ದು, ಯಾವುದೇ ರೋಗಲಕ್ಷಣ ಇಲ್ಲದಿದ್ದರೂ ಸೋಂಕು ದೃಢಪಟ್ಟಿದೆ. ತಕ್ಷಣವೇ ಬೆಂಗಳೂರಿನ ಹಳೇ ವಿಮಾನನಿಲ್ದಾಣ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ