ಚಿಕ್ಕಮಗಳೂರು:
ದತ್ತಾತ್ರೇಯ ಸ್ವಾಮಿಯ ಬಳಿ ಶಾಸಕ ಸಿ. ಟಿ ರವಿ ಹರಕೆ ಕಟ್ಟಿಕೊಂಡು, ಚಿಕ್ಕಮಗಳೂರಿನ ನಾರಾಯಣಪುರದಲ್ಲಿ ಮನೆ ಮನೆಗೆ ತೆರಳಿ ಭಿಕ್ಷಾಟನೆ ನಡೆಸಿದ್ದಾರೆ.
“ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ನಾವು ಹರಕೆ ಮಾಡಿಕೊಳ್ಳುತ್ತಿದ್ದೇವೆ” ಹೀಗಾಗಿ ದತ್ತಜಯಂತಿಯ ಅಂಗವಾಗಿ ಭಿಕ್ಷಾಟನೆ ಮಾಡುತ್ತಿದ್ದೇನೆ. ದೇಶದ ಪ್ರಗತಿಗೆ ಮೋದಿ ಪ್ರಧಾನಿಯಾಗಬೇಕೆಂದು ಹರಕೆ ಹೊತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಮೋದಿಯಿಂದ ಭಾರತಕ್ಕೆ ಜಾಗತಿಕ ಮಟ್ಟದಲ್ಲಿ ಗೌರವ ಸಿಕ್ಕಿದೆ. ಆದ್ದರಿಂದ ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 350ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು. ನಮಗೆ ಸ್ವಾರ್ಥರಹಿತ ರಾಜಕಾರಣದ ಅವಶ್ಯಕತೆ ಇದೆ ಎಂದು ಭಿಕ್ಷಾಟನೆ (ಪಡಿ ಸಂಗ್ರಹ) ವೇಳೆ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
