ದಾವಣಗೆರೆ :
ಸಮರ್ಪಕ ಮರಳು ಪೂರೈಕರ ಹಾಗೂ ಅವಳಿ ತಾಲ್ಲೂಕನ್ನು ಬರ ಪೀಡಿತ ಘೋಷಣೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ, ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರನ್ನು ಬಂಧಿಸಲಾಗಿದೆ.
ಸಮರ್ಪಕ ಮರಳು ಪೂರೈಕೆ ಹಾಗೂ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳನ್ನು ಬರ ಪೀಡಿತ ಘೋಷಣೆ ಮಾಡುವಂತೆ ಆಗ್ರಹಿಸಿ ಇಂದು ಹೊನ್ನಾಳಿ ಬಂದ ಗೆ ಕರೆ ನೀಡಲಾಗಿತ್ತು. ಅಲ್ಲದೇ ಶನಿವಾರ ನ್ಯಾಮತಿ ತಾಲೂಕಿನಲ್ಲಿ ಬಂದ್ ಸಂಪೂರ್ಣವಾಗಿ ಯಶಸ್ವಿಯಾಗಿತ್ತು.
ಈ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ಶಾಸಕ ರೇಣುಕಾಚಾರ್ಯ ಅವರು ಕಿರುಕುಳ ನೀಡುತ್ತಿದ್ದರು, ಎನ್ನಲಾಗಿದೆ. ಇದೇ ವೇಳೆ ರೇಣುಕಾಚಾರ್ಯ ವರ್ತನೆಯಿಂದ ಬೇಸತ್ತ ಜನತೆ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ರೇಣುಕಾಚಾರ್ಯ ಅವರನ್ನು ಸ್ಥಳದಿಂದ ಹೊರಗೆ ಬರುವಂತೆ ಮನವಿ ಮಾಡಿಕೊಂಡಿದ್ದಾರೆ. ಆದರೆ ಪೊಲೀಸರ ಮಾತಿಗೂ ಬೆಲೆನೀಡದ ರೇಣುಕಾಚಾರ್ಯ ಅವರು ಎಂದಿನ ತಮ್ಮ ದರ್ಪದ ಶೈಲಿಯಲ್ಲಿ ಪೊಲೀಸರಿಗೆ ಅವಾಜ್ ಹಾಕಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಸ್ಥಳದಲ್ಲಿದ್ದ ಪೊಲೀಸರು ಮುಂಜಾಗ್ರತ ಕ್ರಮವಾಗಿ ರೇಣುಕಾಚಾರ್ಯ ಹಾಗೂ ಅವರ ಹತ್ತಕ್ಕೂ ಹೆಚ್ಚು ಮಂದಿ ಸಹಚರನ್ನು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ