ಬೆಂಗಳೂರು :
ಕೊರೊನಾ ವೈರಸ್ ಬಳಲುತ್ತಿರುವ ಬಸವ ಕಲ್ಯಾಣ ಶಾಸಕ ನಾರಾಯಣರಾವ್(65) ಅವರು ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಾರಾಯಣರಾವ್(65) ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಚಿಂತಾಜನವಾಗಿತ್ತು. ಅವರಿಗೆ ನ್ಯುಮೋನಿಯಾ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ಸಮಸ್ಯೆಯಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಇದೀಗ ಕೊರೋನಾ ಸೋಂಕಿನ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
