ಮಂಗಳೂರು :
ಮೈಸೂರು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ರಾಮದಾಸ್ ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಗೋಡೆಗೆ ಡಿಕ್ಕಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಜಾಲ್ಸೂರಿನಲ್ಲಿ ನಡೆದಿದೆ.
ಶಾಸಕ ರಾಮದಾಸ್ ಮೈಸೂರಿನಿಂದ ಸುಳ್ಯ ಮಾರ್ಗವಾಗಿ ಮಂಗಳೂರು ಬರುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸುಳ್ಯ ಜಾಲ್ಸೂರಿನಲ್ಲಿ ಕಾರು ರಸ್ತೆಯಲ್ಲಿನ ಗೋಡೆಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಶಾಸಕ ರಾಮದಾಸ್ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/08/RAMDAS-ACCIDENT-AV-3-768x37.gif)