ಬಳ್ಳಾರಿ:
ಅಖಂಡ ಬಳ್ಳಾರಿ ಜಿಲ್ಲೆಯನ್ನು ಯಾವುದೇ ಕಾರಣಕ್ಕೂ ವಿಭಜನೆ ಮಾಡಲು ಬಿಡುವುದಿಲ್ಲ. ವಿಭಜಿಸಿದರೆ ರಾಜೀನಾಮೆ ನೀಡುವುದಾಗಿ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಎಚ್ಚರಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿಯನ್ನು ಪ್ರತಿನಿಧಿಸುವ ನಾಲ್ಕು ಬಿಜೆಪಿ ಶಾಸಕರಿದ್ದು, ಯಾರಿಗೂ ಜಿಲ್ಲೆ ವಿಭಜಿಸುವ ಸರ್ಕಾರದ ಕ್ರಮಕ್ಕೆ ಒಪ್ಪಿಗೆ ಇಲ್ಲ. ಆನಂದ್ ಸಿಂಗ್ ಜಿಂದಾಲ್ ವಿಚಾರಕ್ಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಬಳ್ಳಾರಿ ಜಿಲ್ಲೆಯ ವಿಭಜನೆ ಬಗ್ಗೆ ರಾಜೀನಾಮೆ ನೀಡುವ ಸಂದರ್ಭದಲ್ಲಿ ಮಾತನಾಡಿರಲಿಲ್ಲ. ಆದರೀಗ ಸರ್ಕಾರ 5 ತಾಲೂಕುಗಳನ್ನು ವಿಭಾಗಿಸಿ ವಿಜಯನಗರ ಜಿಲ್ಲೆ ರಚನೆಗೆ ತರಾತುರಿಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಬಾರದು. ಸಂಪುಟದ ಮುಂದೆ ಜಿಲ್ಲಾ ವಿಭಜನೆಯ ಪ್ರಸ್ತಾಪ ಮಾಡಬಾರದು ಎಂದು ಆಗ್ರಹಿಸಿದ್ದಾರೆ.
“ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಕ್ಕೆ, ಸರ್ಕಾರ ಹೊಸ ಜಿಲ್ಲೆ ಘೋಷಣೆ ಮಾಡಬಾರದು. ಜಿಲ್ಲೆಯಲ್ಲಿ ನಾಲ್ಕು ಜನ ಬಿಜೆಪಿ ಶಾಸಕರಿದ್ದೇವೆ. ನಮ್ಮನ್ನ ಕರೆದು ಸಿಎಂ ಬಿಎಸ್ ವೈ ಚರ್ಚೆ ನಡೆಸಬೇಕು” ಎಂದೂ ಹೇಳಿದ್ದಾರೆ.
ಬಳ್ಳಾರಿ ಜಿಲ್ಲೆಯನ್ನು ಪ್ರತ್ಯೇಕಿಸಿ ವಿಜಯನಗರ ಜಿಲ್ಲೆಯನ್ನಾಗಿಸುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕ್ರಮಕ್ಕೆ ಆಡಳಿತರೂಢ ಪಕ್ಷದ ಶಾಸಕರೇ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ