ಮೈಸೂರು:
ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈ ಹಿಂದೆ ಫರ್ಹಾನ್ ಎಂಬ ವ್ಯಕ್ತಿ ನಡೆಸಿದ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಶಾಸಕ ತನ್ವೀರ್ ಸೇಠ್ ಅವರಿಗೆ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ವೈದ್ಯರು ಡಿಸ್ಚಾರ್ಜ್ ಆಗುವಂತೆ ಸೂಚಿಸಿದ್ದು, ಸೋಮವಾರ ರಾತ್ರಿ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.
ಕಳೆದ ನೆವೆಂಬರ್ 17 ರಂದು ತನ್ವೀರ್ ಸೇಠ್ ಮೇಲೆ ಎಸ್ಡಿಪಿಐ ಕಾರ್ಯಕರ್ತ ಫರ್ಹಾನ್ ಪಾಷಾ ಎಂಬಾತ ಕೊಲೆ ಯತ್ನ ನಡೆಸಿದ್ದ. ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
