ಬೆಂಗಳೂರು:
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ಸುಮಾರು 20 ಕ್ಕೂ ಹೆಚ್ಚು ಶಾಸಕರು ಒತ್ತಾಯಿಸಿದ್ದಾರೆ.
ಕಳೆದ ರಾತ್ರಿ ನಡೆದ ಸಭೆಯಲ್ಲಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ರವರ ೆದುರೇ ಕುಮಾರಸ್ವಾಮಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವಂತೆ ಶಾಸಕರು ಆಗ್ರಹಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಕುರಿತು ಇಂದು ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಉಳಿದುಕೊಂಡಿರುವ ಬಿಡದಿ ಬಳಿ ಇರುವ ಈಗಲ್ ಟನ್ ರೆಸಾರ್ಟ್ ನಲ್ಲಿ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ