ಎಂ.ಎನ್.ಕೋಟೆ :
ಗುಬ್ಬಿ ತಾಲ್ಲೂಕಿನ ಮಂಚಲದೊರೆ ಹಾಗೂ ಅಂಕಸಂದ್ರ ಗ್ರಾಮ ಪಂಚಾಯಿತಿಯಲ್ಲಿ ಎರಡನೇ ದಿನವೂ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಚುನಾವಣೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ಎರಡು ಗ್ರಾಮ ಪಂಚಾಯಿತಿಯ 33 ಹಳ್ಳಿಯ ಜನರು ಮತದಾನವನ್ನು ಬಹಿಷ್ಠರಿಸಿದ್ದಾರೆ. ಮಠದ ಕೆರೆ ಹಾಗೂ ಶೇಷನಹಳ್ಳಿ ಕೆರೆಗೆ ಹೇಮಾವತಿ ನೀರು ಹರಿಸುವ ಭರವಸೆ ಹುಸಿಯಾಗಿದ್ದು ಜನರು ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ. ಯಾವುದೇ ಕಾರಣಕ್ಕೂ ಚುನಾವಣೆ ನಡೆಯವ ಪ್ರಮಯವೇ ಇಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ.
ನಿಟ್ಟೂರು ಹೋಬಳಿಯ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ಒಂದು ನಾಮಪತ್ರ ಸಲ್ಲಿಕೆಯಾಗಿದೆ ಎಂದು ಚುನಾವಣೆ ಅಧಿಕಾರಿ ಪಿ.ಲಿಂಗರಾಜು ತಿಳಿಸಿದ್ದಾರೆ. ಉದ್ದೆಹೊಸಕೆರೆ ಗ್ರಾಮದ ಮಂಜುನಾಥ್ ನಾಮಪತ್ರ ಸಲ್ಲಿಸಿದರು.
ಗುಬ್ಬಿ ತಾಲ್ಲೂಕಿನ ಅಳಿಲಘಟ್ಟ, ಹೊಸಕೆರೆ, ತ್ಯಾಗಟೂರು ಗ್ರಾಮ ಪಂಚಾಯಿತಿಯಲ್ಲಿ ತಲಾ ಎರಡು ನಾಮಪತ್ರಗಳು ಸಲ್ಲಿಕೆಯಾಗಿದ್ದು, ಹಾಗಲವಾಡಿ ಗ್ರಾಮ ಪಂಚಾಯಿತಿಯಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ