ಹುಬ್ಬಳ್ಳಿ :
ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಬಂದು ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪ್ರಧಾನಿ ಮೋದಿ ಅವರು ಬರೀ ಸುಳ್ಳು ಹೇಳುತ್ತಾರೆ. ಭಾನುವಾರ ರಫೇಲ್ ಬಗ್ಗೆ ದೇಶದ ಚೌಕಿದಾರ ಮಾತಾಡಿಲ್ಲ. ರೈತರ ಸಾಲವನ್ನು ಅವರೇಕೆ ಮನ್ನಾ ಮಾಡಿಲ್ಲ ಎಂದು ಪ್ರಶ್ನಿಸಿದರು. ನಾವು ಈ ವರ್ಷದ ಬಜೆಟ್ ನಲ್ಲಿ ರೈತರ ಸಾಲಮನ್ನಾಕ್ಕೆ ಹಣ ಇಟ್ಟಿದ್ದೇವೆ. ಮೋದಿಯವರಿಗೆ ಸುಳ್ಳು ಹೇಳುವುದನ್ನು ಬಿಟ್ಟು ಬೇರೇನು ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ 22 ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿ, ಬಿಜೆಪಿಯನ್ನು ದೂರವಿಡುವ ಉದ್ದೇಶದಿಂದಲೇ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್-ಜೆಡಿಎಸ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಯನ್ನು ಮಣಿಸಲು ತಯಾರಿ ನಡೆಸುತ್ತಿದೆ. ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ