ಬೆಂಗಳೂರು:
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುಮಾರು 50 ಕೋಟಿ ರೈತ ಕುಟುಂಬದ ಮೇಲೆ ಕಣ್ಣಿಟ್ಟಿರುವ ಮೋದಿ ನೇತೃತ್ವದ ಕೇಂದ್ರ ಸರಕಾರ ದೇಶದ ರೈತರನ್ನು ತಮ್ಮತ್ತ ಸೆಳೆಯಲು ರೈತರ ಸಾಲಮನ್ನಾ ಮಾಡುವ ಚಿಂತನೆಯನ್ನು ಮಾಡಿದೆ.
ಪಂಚ ರಾಜ್ಯಗಳ ಸೋಲಿನಿಂದ ಕಂಗೆಟ್ಟಿರುವ ಕೇಂದ್ರ ಸರ್ಕಾರ ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ದೇಶದ ರೈತರನ್ನು ತಮ್ಮ ಕಡೆಗೆ ಸೆಳೆಯಲು ದೇಶದ ರೈತರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ಸಾಲವನ್ನು ಮನ್ನಾ ಮಾಡಲು ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ. ಸಾಲಮನ್ನಾ ಮಾಡುವ ಸಂಬಂಧ ಶೀಘ್ರವೇ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದ್ದು, ಅನ್ನದಾತರನ್ನು ಸೆಳೆಯಲು ಮೋದಿ ಸರ್ಕಾರ ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ತಿರುಗೇಟು ನೀಡಿರುವ ಕುಮಾರಸ್ವಾಮಿ, ಕೇಂದ್ರ ಸರಕಾರ ನಮ್ಮ ದಾರಿಗೆ ಬರಲೇಬೇಕು. ರೈತರ ಸಾಲ ಮನ್ನಾ ಮಾಡಲೇಬೇಕಾಗುತ್ತದೆ. ನಾವು ರೈತರ ಸಾಲಮನ್ನಾ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದೇವು. ಆದರೆ ರೈತರ ಸಾಲಮನ್ನಾ ವಿಚಾರದಲ್ಲಿ ಕೇಂದ್ರ ನಮಗೆ ಸಹಕಾರ ನೀಡುತ್ತಿಲ್ಲ. ಇದೀಗ ಕೇಂದ್ರವೇ ಸಾಲಮನ್ನಾಕ್ಕೆ ಮುಂದಾಗಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
