ಮೋದಿ ಸರ್ಕಾರದಲ್ಲಿ ಕರ್ನಾಟಕದ ಈ ಮೂವರಿಗೆ ಮಂತ್ರಿಗಿರಿ!!!

ನವದೆಹಲಿ:

     ರಾಜ್ಯದ ಬಿಜೆಪಿ ಸಂಸದರಾದ ಡಿ.ವಿ.ಸದಾನಂದಗೌಡ, ಸುರೇಶ ಅಂಗಡಿ, ಪ್ರಹ್ಲಾದ್‌ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 

     ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ರಾಜ್ಯ ನಾಯಕರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಕರ್ನಾಟಕದ ಮೂವರಿಗೆ ಕ್ಯಾಬಿನೆಟ್ ಸ್ಥಾನ ಸಿಕ್ಕಿದೆ.

     ಕಳೆದ ಬಾರಿ ಸಾಂಖ್ಯಿಕ ಖಾತೆಯನ್ನು ನಿರ್ವಹಿಸಿದ್ದ ಡಿ.ವಿ.ಸದಾನಂದ ಗೌಡ ಅವರಿಗೆ ಈ ಬಾರಿಯೂ ಮೋದಿ ಕ್ಯಾಬಿನೆಟ್‍ನಲ್ಲಿ ದರ್ಜೆಯ ಮಂತ್ರಿ ಸ್ಥಾನ ನೀಡಿದ್ದಾರೆ.

      ಧಾರವಾಡದ ಸಂಸದ ಪ್ರಹ್ಲಾದ್ ಜೋಷಿ ಮತ್ತು ಬೆಳಗಾವಿಯ ಸಂಸದ ಸುರೇಶ್ ಅಂಗಡಿ ಅವರಿಗೆ ಕ್ಯಾಬಿನೆಟ್ ಸ್ಥಾನ ಸಿಕ್ಕಿದೆ. ಸದಾನಂದ ಗೌಡ ಒಕ್ಕಲಿಗ, ಪ್ರಹ್ಲಾದ್ ಜೋಷಿ ಬ್ರಾಹ್ಮಣ, ಸುರೇಶ್ ಅಂಗಡಿ ಲಿಂಗಾಯತರಾಗಿದ್ದಾರೆ.

      ಇನ್ನು ಹಿರಿಯರಾದ ಜಿ.ಎಸ್‌. ಬಸವರಾಜ್‌, ಶ್ರೀನಿವಾಸ ಪ್ರಸಾದ್‌, ಮೂರನೇ ಬಾರಿ ಆಯ್ಕೆಯಾಗಿರುವ ಶಿವಕುಮಾರ್‌ ಉದಾಸಿ, ಮಹಿಳಾ ಕೋಟಾದಡಿ ಶೋಭಾ ಕರಂದ್ಲಾಜೆ ಅವರು ಸಚಿವ ಸ್ಥಾನದ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap