ರಾಯಚೂರು:
ಲಾರಿ -ಬೈಕ್ ನಡುವೆ ಅಪಘಾತ ಸಂಭವಿಸಿ ತಾಯಿ, ಮಗು ಮೃತಪಟ್ಟಿರುವ ದುರ್ಘಟನೆ ಎಲ್‌ಬಿಎಸ್ ನಗರದ ಬಳಿ ಸಂಭವಿಸಿದೆ.
ಈಶ್ವರಮ್ಮ ಮಗಳು ವನಿತಾ ಅನಾರೋಗ್ಯದ ಹಿನ್ನೆಲೆಯಲ್ಲಿ ಅಣ್ಣನ ಮಗ ಸೂರ್ಯ ಪ್ರಕಾಶನೊಂದಿಗೆ ಬೈಕ್ ಮೇಲೆ ನಗರದ ಅಮೃತ ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ವಾಪಸ್ ಗ್ರಾಮಕ್ಕೆ ತೆರಳುತ್ತಿದ್ದಳು. ಈ ವೇಳೆ ಮಾರ್ಗಮಧ್ಯೆ ಲಾರಿ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳದಿಂದ ಲಾರಿ ಚಾಲಕ ಪರಾರಿಯಾಗಿದ್ದಾನೆ.
ಬೈಕ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಈ ಕುರಿತು ರಾಯಚೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ