ಮಂಡ್ಯ:
ಕುಟುಂಬ ಕಲಹಕ್ಕೆ ಬೇಸತ್ತು ಗೃಹಿಣಿಯೊಬ್ಬಳು ತನ್ನ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ, ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿಯಲ್ಲಿ ನಡೆದಿದೆ.
ಘಟನೆಯಲ್ಲಿ ಪುನೀತ್(2) ಎಂಬ ಮಗು ಸಾವಿಗೀಡಾಗಿದ್ದಾನೆ. ಮತ್ತೊಬ್ಬ ಪುತ್ರ ಲೋಹಿತ್(3) ಹಾಗೂ ತಾಯಿ ಸೌಜನ್ಯ (24) ಅಸ್ವಸ್ಥರಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಎರಡನೇ ಮಗು ಸಾವುಗೀಡಾಗಿದ್ದು, ತಾಯಿ ಮತ್ತು ಮತ್ತೊಂದು ಮಗು ಅಸ್ವಸ್ಥರಾಗಿದ್ದು, ಮಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ