ಮೈಸೂರು :
ಪಾರ್ಕ್ನಲ್ಲಿ ಕುಳಿತಿದ್ದ ವೇಳೆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಪರಿಣಾಮ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ ನಗರದ ನಗರದ ಪೀಪಲ್ಸ್ ಪಾರ್ಕ್ನಲ್ಲಿ ನಡೆದಿದೆ.
ಕೊಡಗು ಮೂಲದ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಮೈಸೂರಿಗೆ ಆಗಮಿಸಿದ್ದಳು. ಈ ವೇಳೆ ವಿಶ್ರಾಂತಿಗೆಂದು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಪೀಪಲ್ಸ್ ಪಾರ್ಕ್ನಲ್ಲಿ ಕುಳಿತಿದ್ದರು. ಈ ವೇಳೆ ಆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ.
ತಕ್ಷಣ ಅಲ್ಲೇ ಇದ್ದ ಶಾಲೆಯ ದೈಹಿಕ ಶಿಕ್ಷಕಿ ಶೋಭಾ ಅವರು ಗರ್ಭಿಣಿ ಸಹಾಯಕ್ಕೆ ಬಂದಿದ್ದಾರೆ. ಸಾರ್ವಜನಿಕರ ಸಹಾಯದಿಂದ ಸ್ಥಳದಲ್ಲೇ ಮಹಿಳೆ ಹೆರಿಗೆ ಮಾಡಿಸಿದ್ದಾರೆ.
ಬಳಿಕ ಸರ್ಕಾರಿ ಆಸ್ಪತ್ರೆಗೆ ಮಗು ಮತ್ತು ತಾಯಿಯನ್ನು ದಾಖಲಿಸಲಾಯಿತು. ಸರ್ಕಾರಿ ಆಸ್ಪತ್ರೆಯಲ್ಲಿ ತಾಯಿ-ಮಗುವಿಗೆ ಚಿಕತ್ಸೆ ನೀಡಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
