ಬೆಂಗಳೂರು :
ಇಂದಿನಿಂದ ಆರಂಭವಾದ ಸಂಸತ್ ನ ಮೊದಲ ಅಧಿವೇಶನಕ್ಕೆ ಸಂಸದ ಪ್ರಜ್ವಲ್ ರೇವಣ್ಣ ಗೈರು ಹಾಜರಾಗಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಜ್ವಲ್ ರೇವಣ್ಣ, ಅನಾರೋಗ್ಯದ ಕಾರಣದಿಂದ ಅಧಿವೇಶನಕ್ಕೆ ಬರಲು ಆಗಿಲ್ಲ. ಜೂನ್ 19ರಂದು ಕಲಾಪಕ್ಕೆ ಹಾಜರಾಗುತ್ತೇನೆ. ನಿಮ್ಮ ಸಲಹೆ, ಮಾರ್ಗದರ್ಶನ ನನಗೆ ಅಗತ್ಯ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಇಂದಿನಿಂದ ಜುಲೈ 26ರವರೆಗೆ ಒಟ್ಟು 40 ದಿನಗಳ ಕಾಲ ಅಧಿವೇಶನ ನಡೆಯಲಿದ್ದು ಈಗಾಗಲೇ ಪ್ರಧಾನಿ ಮೋದಿ ಸಂಸತ್ ಅಧಿವೇಶನ ಸುಗಮವಾಗಿ ನಡೆಸಲು ಪ್ರತಿಪಕ್ಷಗಳು ಸಹಕರಿಸುವಂತೆ ಮನವಿ ಮಾಡಿದ್ದಾರೆ. ಆದರೆ ಸಂಸದ ಪ್ರಜ್ವಲ್ ರೇವಣ್ಣ ಮೊದಲ ದಿನವೇ ಗೈರು ಹಾಜರಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
