ಕೊಪ್ಪಳ :

ಸಂಸದ ಕರಡಿ ಸಂಗಣ್ಣ ಅವರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಅದರ ಸಂಬಂಧ ಸಂಸದ ಸ್ವತಃ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ನನ್ನ ಕರೋನ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ವೈದ್ಯರ ಸಲಹೆಯಂತೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ.
ನನ್ನ ಭೇಟಿಯಾದ ಕಾರ್ಯಕರ್ತರು ಹಾಗೂ ಮುಖಂಡರು ಯಾರಿಗಾದರೂ ಕರೋನಾ ಲಕ್ಷಣ ಬಂದರೆ ತಕ್ಷಣವೇ ಪರೀಕ್ಷೆ ಮಾಡಿಸಿಕೊಳ್ಳಿ.
ಕ್ಷೇತ್ರದ ಜನರ ತುರ್ತು ಕೆಲಸಗಳಿಗೆ ನನ್ನ ಆಪ್ತ ಸಹಾಯಕರನ್ನು ದೂರವಾಣಿ ಮೂಲಕ ಸಂಪರ್ಕಿಸಬಹುದು.— KARADI SANGANNA (@SangannaKaradi) August 19, 2020
“ನನ್ನ ಕರೋನ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ವೈದ್ಯರ ಸಲಹೆಯಂತೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. “ನನ್ನ ಭೇಟಿಯಾದ ಕಾರ್ಯಕರ್ತರು ಹಾಗೂ ಮುಖಂಡರು ಯಾರಿಗಾದರೂ ಕರೋನಾ ಲಕ್ಷಣ ಬಂದರೆ ತಕ್ಷಣವೇ ಪರೀಕ್ಷೆ ಮಾಡಿಸಿಕೊಳ್ಳಿ. ಎಂದು ಸಂಸದರು ಟ್ವೀಟ್ ಮಾಡಿದ್ದಾರೆ.
ಜಿಲ್ಲೆಯ ಶಾಸಕರಾದ ಪರಣ್ಣ ಮುನವಳ್ಳಿ, ರಾಘವೇಂದ್ರ ಹಿಟ್ನಾಳ್, ಹಾಲಪ್ಪ ಆಚಾರ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿತ್ತು. ಎಲ್ಲರೂ ಐಸೋಲೇಶನ್ ನಲ್ಲಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








