ತುಮಕೂರು:
ಕಾಂಗ್ರೆಸ್‌ನಲ್ಲಿ ಬಂಡಾಯವೆದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಪಾಳಯದಲ್ಲಿ ನಡುಕ ಹುಟ್ಟಿಸಿದ್ದ ಮುದ್ದಹನುಮೇಗೌಡ ಅವರು ನಾಮಪತ್ರ ಹಿಂಪಡೆಯಲು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಮೈತ್ರಿ ಪಕ್ಷದ ಅಭ್ಯರ್ಥಿ ಎಚ್.ಡಿ. ದೇವೇಗೌಡ ವಿರುದ್ಧ ಸ್ಪರ್ಧಿಸಿಯೇ ಸಿದ್ಧ ಎಂದು ತೊಡೆತಟ್ಟಿದ್ದ ಸಂಸದ ಮುದ್ದಹನುಮೇಗೌಡರ ಮನವೊಲಿಸುವುದರಲ್ಲಿ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಕೊನೆಗೂ ಯಶಸ್ವಿಯಾಗಿದ್ದಾರೆ.
ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿಗಳಾದ ಮುದ್ದಹನುಮೇಗೌಡ ಮತ್ತು ಕೆ.ಎನ್.ರಾಜಣ್ಣ ಅವರಿಬ್ಬರೊಂದಿಗೂ ಸಿದ್ದರಾಮಯ್ಯ ಅವರು ತಮ್ಮ ನಿವಾಸ ಕಾವೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಜತೆಗೂಡಿ ಸತತ ಸಭೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಖಾಡದಿಂದ ಹಿಂದಕ್ಕೆ ಸಂಸದ ಮುದ್ದಹನುಮೇಗೌಡರು ಕಣದಿಂದ ಸರಿದಿದ್ದಾರೆ ಎಂದು ಹೇಳಲಾಗಿದೆ. ಇದರಿಂದ ಮೈತ್ರಿಪಕ್ಷಗಳು ನೆಮ್ಮದಿಯ ಉಸಿರುಬಿಡುವಂತಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ