ಚಿಕ್ಕಮಗಳೂರು:
ಆಸ್ತಿ ವಿಚಾರವಾಗಿ ಅಣ್ಣತಮ್ಮನ ಕಿತ್ತಾಟ ಓರ್ವನ ಕೊಲೆಯೊಂದಿಗೆ ಅಂತ್ಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಚೇಗು ಎಂಬ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿರುವುದು ವರದಿಯಾಗಿದೆ.
ಚೇಗು ಗ್ರಾಮ ನಿವಾಸಿ ಮಂಜಯ್ಯ (58) ಮೃತಪಟ್ಟ ವ್ಯಕ್ತಿ. ಇವರ ತಮ್ಮ ಲಕ್ಷ್ಮಣ ಕೊಲೆ ಆರೋಪಿಯಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಬಹಳ ದಿನಗಳಿಂದ ಆಸ್ತಿ ವಿಚಾರವಾಗಿ ಇವರೊಳಗೆ ವೈಮನಸ್ಸು ಮೊದಲು ಇತ್ತು. ಸೋಮವಾರ ರಾತ್ರಿ ಸಹ ಇದೇ ವಿಚಾರ ಇಬ್ಬರ ನಡುವೆ ಮಾತಿನ ಚಕಮಕಿಗೆ ಕಾರಣವಾಗಿದೆ. ನಿನ್ನೆ ರಾತ್ರಿ ಇವರೊಳಗೆ ಇದೇ ವಿಚಾರದಲ್ಲಿ ಗಲಾಟೆ ನಡೆದಿದೆಯೆನ್ನಲಾಗಿದೆ. ಈ ವೇಳೆ ಆರೋಪಿ ಲಕ್ಷ್ಮಣ ಅಣ್ಣ ಮಂಜಯ್ಯರ ಮೇಲೆ ಗುಂಡು ಹಾರಾಟ ನಡೆಸಿದನೆನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ಮಂಜಯ್ಯ ಕೊನೆಯುಸಿರೆಳೆದಿದ್ದಾರೆ.
ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವ ಬಣಕಲ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ