ಕಾಪು : ಪಿಕ್ ಆಪ್ ವಾಹನ ಪಲ್ಟಿ ; ಸರಣಿ ಅಪಘಾತ!!

ಕಾಪು :

     ಶಿವಮೊಗ್ಗದಿಂದ ಮಂಗಳೂರು ಕಡೆ ಸಾಗುತ್ತಿದ್ದ ಪಿಕ್‌ಆಪ್ ವಾಹನವೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಮತ್ತೊಂದು ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ರಾ.ಹೆ. 66 ರ ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೇವಸ್ಥಾನದ ಬಳಿ ಬುಧವಾರ ಮುಂಜಾನೆ ನಡೆದಿದೆ.

    ಬಾಳೆಹಣ್ಣು ತುಂಬಿಸಿಕೊಂಡು ಮಂಗಳೂರಿಗೆ ತೆರಳುತ್ತಿದ್ದ ಮಿನಿ ಟೆಂಫೋ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಹಿಂಬದಿಯಲ್ಲಿ ಮೀನು ತುಂಬಿಸಿಕೊಂಡು ಕಿನ್ನಿಗೋಳಿ ಕಡೆಗೆ ಸಾಗುತ್ತಿದ್ದ ವಾಹನ ಡಿಕ್ಕಿ ಹೊಡೆದ ಪರಿಣಾಮ‌ ಈ ಘಟನೆ ಸಂಭವಿಸಿದೆ. 

      ಘಟನೆಯಲ್ಲಿ ಬಾಳೆಹಣ್ಣು ವಾಹನದ ಚಾಲಕನಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಅರ್ಧ ಗಂಟೆಗಳ ಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಕಾಪು ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap