ಆರ್.ಆರ್.ನಗರ : ಭಾರಿ ಮತಗಳ ಅಂತರದಿಂದ ಮುನರತ್ನ ಗೆಲುವು!!

ಬೆಂಗಳೂರು : 

     ರಾಜರಾಜೇಶ್ವರಿನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಯ್ಡು ಹ್ಯಾಟ್ರಿಕ್ ಗೆಲುವನ್ನು ಸಾಧಿಸುವ ಮೂಲಕ ಗೆಲುವಿನ ಕಿರೀಟ ತೊಟ್ಟಿದ್ದಾರೆ.

       ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮುಗಿದಿದ್ದು, ಆರ್.ಆರ್.ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

      ಬಿಜೆಪಿ ಅಭ್ಯರ್ಥಿ ಮುನಿರತ್ನ 1,25,734 ಮತಗಳನ್ನ ಪಡೆದರೆ, ಕಾಂಗ್ರೆಸ್​ನ ಕುಸುಮಾ 67,798 ಮತ್ತು ಜೆಡಿಎಸ್​ನ ಕೃಷ್ಣಮೂರ್ತಿ 10,221 ವೋಟ್​ಗಳನ್ನ ಪಡೆದಿದ್ದಾರೆ. ಈ ಮೂಲಕ ಮುನಿರತ್ನ 57,936 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.  

    2013ರ ಚುನಾವಣೆಯಲ್ಲಿ 71,064 ಮತಗಳನ್ನು ಗಳಿಸಿದ್ದ ಮುನಿರತ್ನ, 18,813 ಮತಗಳ ಅಂತರದಿಂದ ಗೆದ್ದಿದ್ದರು. 2018ರ ಚುನಾವಣೆಯಲ್ಲಿ 1,08,064 ಮತಗಳನ್ನು ಗಳಿಸಿ, 25,492 ಮತಗಳ ಅಂತರದಿಂದ ಗೆದ್ದಿದ್ದರು. ಇದೀಗ 2020ರ ಉಪ ಚುನಾವಣೆಯಲ್ಲಿ 1,03,291 ಮತಗಳನ್ನು ಗಳಿಸಿದ್ದು, 44,548ಕ್ಕೂ ಹೆಚ್ಚು ಮತಗಳಿಂದ ಭರ್ಜರಿ ಹ್ಯಾಟ್ರಿಕ್ ಗೆಲುವನ್ನು ಸಾಧಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link
Powered by Social Snap