ಗ್ರಾಮಪಂಚಾಯಿತಿ ಅಧ್ಯಕ್ಷನ ಬರ್ಬರ ಹತ್ಯೆ!!

ಹುಬ್ಬಳ್ಳಿ:

       ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಮ ಪಂಚಾಯಿತಿ ಅಧ್ಯಕ್ಷನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಅಗಡಿ ಕ್ರಾಸ್ ಬಳಿ ನಡೆದಿದೆ.

      ಛಬ್ಬಿ‌ ಗ್ರಾಮ ಪಂಚಾಯಿತಿ ಅಧ್ಯಕ್ಷನಾಗಿದ್ದ ಬಸವರಾಜ್ ಕಡಪಟ್ಟಿ ಎಂಬಾತನೇ ಕೊಲೆಯಾಗಿರುವ ದುರ್ದೈವಿ. ಹಳೇ ವೈಷಮ್ಯದ ಹಿನ್ನೆಲೆ‌ಯಲ್ಲಿ ತಡರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಸಂಶಯಿಸಲಾಗಿದೆ. 

      ಘಟನೆ ಸಂಬಂಧ ಹುಬ್ಬಳ್ಳಿ ಗ್ರಾಮೀಣಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ