ಚಿತ್ರದುರ್ಗ:
ಜಿಲ್ಲೆಯ ಹಳೇ ಬೆಂಗಳೂರು ರಸ್ತೆಯ ಬಳಿಯಿದ್ದ ಕಸದ ರಾಶಿಯಲ್ಲಿ ಅನಾಮಧೇಯ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ.
35 ರ ವಯೋಮಿತಿಯ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಬರ್ಬರವಾಗಿ ಹತ್ಯೆಗೈದು ಕಸದ ರಾಶಿಯಲ್ಲಿ ಎಸೆಯಲಾಗಿದೆ ಎಂದು ಶಂಕಿಸಲಾಗಿದೆ.
ಶವದ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಡಿವೈಎಸ್ಪಿ ಸಂತೋಷ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.
