ಕಲಬುರಗಿ : ಸಿನಿಮೀಯ ರೀತಿಯಲ್ಲಿ ಗುತ್ತಿಗೆದಾರನ ಬರ್ಬರ ಹತ್ಯೆ!!!

ಕಲಬುರಗಿ :

      ಗುತ್ತಿಗೆದಾರರೊಬ್ಬರನೊಬ್ಬನನ್ನು ಸಿನಿಮೀಯ ರೀತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಬುರಗಿ ಹೊರವಲಯದ ಸಿರಸಗಿ ಗ್ರಾಮದ ಬಳಿ ಸೋಮವಾರ ತಡರಾತ್ರಿ ನಡೆದಿದೆ.

      ಜೇವರ್ಗಿ ತಾಲೂಕು ಮಯೂರ ಗ್ರಾಮದ ನಿವಾಸಿ ಶಿವಲಿಂಗ್(45) ಕೊಲೆಯಾದ ವ್ಯಕ್ತಿ. ನಿನ್ನೆ ಶಿವಲಿಂಗ್​​ ಟೆರೆನೋ ನಿಶಾನ್ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ, ಸ್ಕಾರ್ಪಿಯೋ ವಾಹನದಲ್ಲಿ ಬಂದ ಹಂತಕರು ಮೊದಲು ಶಿವಲಿಂಗ್​​ ಅವರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಬಳಿಕ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.

       ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ‌ ಮಾಡಲಾಗಿದ್ದು, ಕೊಲೆಯ ಹಿಂದೆ ಕಾಂಗ್ರೆಸ್ ಜಿಲ್ಲಾ ಪಂಚಾಯ್ತಿ ಸದಸ್ಯ ಶಾಂತಪ್ಪ ಕೂಡಲಗಿ ಸೇರಿದಂತೆ ಹಲವರ ಕೈವಾಡವಿದೆ ಎಂದು ಮೃತ ಶಿವಲಿಂಗ್ ಸಂಬಂಧಿಕರು ಆರೋಪಿಸಿದ್ದಾರೆ. 

       ಇತ್ತೀಚೆಗೆ ಗ್ರಾಮದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಕೊಲೆಯಾದ ಶಿವಲಿಂಗ್ ಜೈಲಿಗೆ ಹೋಗಿ ಸೋಮವಾರ ಜಾಮೀನಿನ ಮೇಲೆ ಹೊರ ಬಂದಿದ್ದನು. ಈ ವಿಷಯ ತಿಳಿದು ಶಾಂತಪ್ಪ ಸಂಬಂಧಿಕರು ಮಾರಕಾಸ್ತ್ರಗಳಿಂದ ಶಿವಲಿಂಗ್ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

        ಘಟನೆಗೆ ಸಂಬಂಧಿಸಿದಂತೆ ಫರ್ತಾಬಾದ್ ಪೊಲೀಸ್ ಠಾಣೆಯಲ್ಲಿ ಶಾಂತಪ್ಪ ಕೂಡಲಗಿ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಾಗಿದೆ. ಪ್ರಕರಣದ ಕುರಿತು ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link