ನವದೆಹಲಿ:
ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಹಿಂದೇಟು ಹಾಕಿದ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ನಿರ್ಧಾರದಿಂದ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ .
2019ರ ಲೋಕಸಭಾ ಚುನಾವಣೆಯಲ್ಲಿ ಮಹಾಘಟಬಂಧನ್ ಸೇರುವಂತೆ ಬಿಎಸ್ಪಿಗೆ ಅವರು ಸಲಹೆ ನೀಡಿದ್ದಾರೆ . ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ ಅಧಿಕಾರದಿಂದ ದೂರ ಇಡುವ ನಿಟ್ಟಿನಲ್ಲಿ ಪ್ರತಿಪಕ್ಷಗಳು ಮಹಾಮೈತ್ರಿ ಒಪ್ಪಂದಕ್ಕೆ ಪ್ರಯತ್ನಿಸುತ್ತಿದ್ದು, ಮುಂಬರುವ ರಾಜಸ್ತಾನ, ಮಧ್ಯ ಪ್ರದೇಶ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಬುಧವಾರ ಪ್ರಕಟಿಸಿದ್ದರು.
ಹಿಂದೂಸ್ತಾನ್ ಟೈಮ್ಸ್ ಲೀಡರ್’ಶಿಪ್ ಶೃಂಗಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಮಧ್ಯಪ್ರದೇಶ ಚುನಾವಣೆಯಲ್ಲಿ ಬಿಎಸ್ಪಿ ಮೈತ್ರಿ ಮಾಡಿಕೊಳ್ಳದಿದ್ದರೆ ನಮ್ಮ ಮೇಲೆ ಪರಿಣಾಮವೇನೂ ಬೀರುವುದಿಲ್ಲ ಆದರೆ ಸೇರಿದ್ದರೆ ಚೆನ್ನಾಗಿತ್ತು ಎಂದು ಅವರು ತಿಳಿಸಿದ್ದಾರೆ .
ಈ ರೀತಿ ಆದ ಮೇಲು ಮುಂಬರುವ ಚುನಾವಣೆಗಳಾದ ಮಧ್ಯಪ್ರದೇಶ, ಛತ್ತೀಸ್ ಗಡ , ರಾಜಸ್ತಾನ ಹಾಗೂ ತೆಲಂಗಾಣದಲ್ಲಿ ಪಕ್ಷ ಗೆಲವು ಸಾಧಿಸಲಿದೆ ಎಂದು ವಿಶ್ವಾಸವಿದೆ ಎಂದು ಹೇಳಿದ್ದಾರೆ . ರಾಜ್ಯ ಹಾಗೂ ಕೇಂದ್ರ ಮಟ್ಟದಲ್ಲಿ ಮೈತ್ರಿ ಕಷ್ಟಸಾಧ್ಯ. ಇದು ಮಾಯಾವತಿ ಅವರಿಗೆ ಗೊತ್ತಿದ್ದು, ನಮ್ಮ ನಾಯಕರೊಂದಿಗೆ ಮಾತುಕತೆ ನಡೆಸುವ ಸಂದರ್ಭದಲ್ಲಿಯೇ ಮಾಯಾವತಿ ಸ್ವತಂತ್ರವಾಗಿ ಸ್ಪರ್ಧಿಸಲು ಹೋಗಿದ್ದಾರೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
