ಮೈಸೂರು :
ಯುವಕನೋರ್ವ ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನನ್ನು ರಕ್ಷಿಸಲು ಹೋದ ಬಾಮೈದುನ ಕೂಡ ಸಾವನ್ನಪ್ಪಿರುವ ಘಟನೆ ಎಚ್.ಡಿ. ಕೋಟೆ ತಾಲೂಕಿನ ಅಣ್ಣೂರು ಹೊಸಳ್ಳಿ ಕೆರೆಯಲ್ಲಿ ನಡೆದಿದೆ.
ಪ್ರಸನ್ನ (25) ಮತ್ತು ನಿಂಗರಾಜು (35) ಮೃತ ದುರ್ದೈವಿಗಳು. ತಂದೆ ಜೊತೆ ಜಗಳ ಮಾಡಿಕೊಂಡಿದ್ದ ಪ್ರಸನ್ನ ಕೆರೆಗೆ ಹಾರಿದ್ದ. ಬಾಮೈದ ಪ್ರಸನ್ನ ಆತ್ಮಹತ್ಯೆಗೆ ಯತ್ನಸಿದ್ದನ್ನು ಕಂಡ ಬಾಮೈದ ನಿಂಗರಾಜು ಆತನನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ, ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ನುರಿತ ಈಜುಪಟುಗಳು ಕೆರೆಯಿಂದ ಮೃತದೇಹಗಳನ್ನ ಹೊರತೆಗೆದಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಎಚ್.ಡಿ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ