ಮೈಸೂರು :

ಕೊರೊನಾ ಅಟ್ಟಹಾಸದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಂಜೆ 6 ರ ನಂತರ ಬಂದ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.
ಹೌದು, ಮೈಸೂರಿನಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಕಠಿಣ ನಿರ್ಧಾರಗಳನ್ನು ಕೈಗೊಳ್ಳಲು ಜಿಲ್ಲಾಡಳಿತ ಹಾಗೂ ಸರ್ಕಾರ ಮುಂದಾಗಿದೆ. ಸಂಜೆ 6 ಗಂಟೆ ಬಳಿಕ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸುತ್ತಿದ್ದೇವೆ. ಶುಕ್ರವಾರದಿಂದ ಮೈಸೂರು ಜಿಲ್ಲೆಯಲ್ಲಿ ಈ ಆದೇಶ ಅನುಷ್ಠಾನಕ್ಕೆ ಬರಲಿದೆ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ನಗರ ಪ್ರದೇಶಗಳಲ್ಲಿ ಮಾಸ್ಕ್ ಹಾಕದವರಿಗೆ 200 ರೂಪಾಯಿ ಹಾಗು ಗ್ರಾಮಾಂತರದಲ್ಲಿ 100 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಹೇಳಿದರು. ಜೊತೆಗೆ ಸಾಮಾಜಿಕ ಅಂತರವನ್ನೂ ಕಾಯ್ದುಕೊಳ್ಳಬೇಕು. ಈಗ ಬಾಯಿ ಮಾತಿನಲ್ಲಿ ಹೇಳಲಾಗುತ್ತದೆ. ಆಗಲೂ ಜನತೆ ಎಚ್ಚೆತ್ತುಕೊಳ್ಳದೆ, ಗುಂಪು ಗುಂಪಾಗಿ ಕಾಣಿಸಿಕೊಂಡರೆ ದಂಡ ವಿಧಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
ಐಎಲ್‌ಐ ಮತ್ತು ಸ್ಯಾರಿ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಅಂಗಡಿ-ಮುಂಗಟ್ಟುಗಳನ್ನು ಸಂಜೆ 6 ಗಂಟೆ ನಂತರ ಸದ್ಯದ ಮಟ್ಟಿಗೆ ಬಂದ್ ಮಾಡುವ ತೀರ್ಮಾನಕ್ಕೆ ಬರಲಾಗಿದೆ.
ಎಪಿಎಂಸಿಯಲ್ಲಿ ವ್ಯವಹಾರ ಮಾಡುವವರಿಗೆ ಹಾಗೂ ತರಕಾರಿ ಮಾರಾಟ ಮಾಡುವವರಿಗೆ ಕಡ್ಡಾಯವಾಗಿ ಸ್ಕ್ರೀನಿಂಗ್ ಮಾಡಿಸಲಾಗುತ್ತದೆ. ಕಾರಣ ಅಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಒಂದೆಡೆ ಸೇರುವುದರಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








